ಉಡುಪಿ: ಕೇಂದ್ರ ಸರಕಾರವು ದಿನನಿತ್ಯ ಬಳಕೆಯ ಗ್ಯಾಸ್ ಬೆಲೆಯನ್ನು ಏಕಾಏಕಿ ಎರಿಸಿದ್ದು ಇದು ಬಡ ಮಹಿಳೆಯರಿಗೆ ಮತ್ತು ಬಡ ಕುಟುಂಬಕ್ಕೆ ಮಾಡಿದ ಘೋರ ಅನ್ಯಾಯವಾಗಿದ್ದು ಇದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪಕ್ಷದ ನಾಯಕರು ಕಾರ್ಯಕರ್ತರು ಮತ್ತು ಮಹಿಳಾ ಕಾಂಗ್ರೆಸ್ ವತಿಯಿಂದ ನಗರದ ಬ್ರಹ್ಮಗಿರಿ ಸರ್ಕಲ್‌ನಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
ದಿನಾಂಕ 10-03-2026 ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಛೇರಿ ಇಂದ ಬ್ರಹ್ಮಗಿರಿ ಆಸ್ಕರ್ ಫರ್ನಾಂಡಿಸ್ ವೃತ್ತದ ವರೆಗೆ ಕೇಂದ್ರ ಸರಕಾರ ಬಡವರ ವಿರುದ್ಧ ಮಾಡಿದ ಬೆಲೆ ಏರಿಕೆ ವಿರೋಧಿಸಿ ಮಂಗಳವಾರ ಪ್ರತಿಭಟನೆ ನಡೆಯಿತು.
ಪಕ್ಷದ ಮುಖಂಡ ಎಂ.ಎ. ಗಫೂರ್ ಮಾತನಾಡಿ, ಕೇಂದ್ರ ಸರ್ಕಾರವು ಅಡುಗೆ ಅನಿಲ ದರ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಅನ್ಯಾಯ ಮಾಡಿದೆ ಎಂದರು.
ದರ ಏರಿಕೆಯಿಂದಾಗಿ ಜನರು ಮತ್ತೆ ಕಟ್ಟಿಗೆ ಒಲೆಯ ಮೊರೆ ಹೋಗುವಂತೆ ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಪ್ರಧಾನ ಕಾರ್ಯದರ್ಶಿಯಾದ ಪ್ರಶಾಂತ್ ಜತ್ತನ್ನ ಪ್ರಮುಖರಾದ ದಿನೇಶ್ ಹೆಗ್ಡೆ ಮಳವಳ್ಳಿ, ವೆರೋನಿಕಾ ಕರ್ನೆಲಿಯೋ, ಜ್ಯೋತಿ ಹೆಬ್ಬಾರ್, ಹರೀಶ್ ಕಿಣಿ ಉಪಸ್ಥಿತರಿದ್ದರು.