DECEMBER 9, 2022
  • Grace Plaza, 2nd Floor, Bailoor,Udupi – 576101
National News

ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ SSLC ಪರೀಕ್ಷೆಯಲ್ಲಿ ಪಾಸ್/ಫೇಲ್ ಬದಲು ಗ್ರೇಡಿಂಗ್ ವ್ಯವಸ್ಥೆ ಜಾರಿ: ಇನ್ಮುಂದೆ 625ರ ಬದಲು 525 ಅಂಕಗಳು

ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ SSLC ಪರೀಕ್ಷೆಯಲ್ಲಿ ಪಾಸ್/ಫೇಲ್ ಬದಲು ಗ್ರೇಡಿಂಗ್ ವ್ಯವಸ್ಥೆ ಜಾರಿ: ಇನ್ಮುಂದೆ 625ರ ಬದಲು 525 ಅಂಕಗಳು

ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ SSLC ಪರೀಕ್ಷೆಯಲ್ಲಿ ಪಾಸ್/ಫೇಲ್ ಬದಲು ಗ್ರೇಡಿಂಗ್ ವ್ಯವಸ್ಥೆ ಜಾರಿ: ಇನ್ಮುಂದೆ 625ರ ಬದಲು 525 ಅಂಕಗಳು

ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾಸ್ ಹಾಗೂ ಫೇಲ್ ಬದಲು ಗ್ರೇಡಿಂಗ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಹಾಗಾಗಿ 625ರ ಬದಲು ಇನ್ಮುಂದೆ 525ಕ್ಕೆ ಸೀಮಿತಗೊಳಿಸಿ ರಾಜ್ಯ ಸರ್ಕಾರ ಮಹ್ವತದ ನಿರ್ಧಾರ ಪ್ರಕಟಿಸಿದೆ.

ಬೆಂಗಳೂರು: ಹಿಂದಿ ಸೇರಿದಂತೆ ತೃತೀಯ ಭಾಷೆಗಳ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಶೈಕ್ಷಣಿಕ ಒತ್ತಡ ಕಡಿಮೆ ಮಾಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. SSLCಯಲ್ಲಿ ತೃತೀಯ ಭಾಷೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅಂಕ ನೀಡುವ ಬದಲು ಗ್ರೇಡಿಂಗ್ ವ್ಯವಸ್ಥೆ ಜಾರಿ ತರಲು ಮುಂದಾಗಿದೆ.


2026ರಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ತೆಗೆದುಕೊಂಡು ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಜಾರಿ ತರಲು ಸರ್ಕಾರ ಮುಂದಾಗಿದೆ. ಈ ಮೂಲಕ ಇನ್ಮುಂದೆ ಪಾಸ್ ಅಥವಾ ಫೇಲ್ ಬದಲು ಗ್ರೇಡ್ ನೀಡಲು ತೀರ್ಮಾನಿಸಿದೆ.

ರಾಜ್ಯದಲ್ಲಿ ತ್ರಿಭಾಷಾ ಸೂತ್ರ ಜಾರಿಯಲ್ಲಿದ್ದು ಮಾ.31ರಂದು ಎಸ್ಸೆಸ್ಸೆಲ್ಸಿಯ ಹಿಂದಿ ಪರೀಕ್ಷೆ ನಡೆಯಲಿದೆ. ತ್ರಿಭಾಷಾ ಸೂತ್ರ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಮುತ್ತಿಗೆ ಹಾಕುವುದಾಗಿ ಎಚ್ಚರಿದ್ದವು. ಏತ್ಮನಧ್ಯೆ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕ ಬದಲು ಗ್ರೇಡ್ ವ್ಯವಸ್ಥೆ ಜಾರಿ ತರಲು ಮುಂದಾಗಿದೆ.


ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಒಟ್ಟು ಅಂಕ 625ರ ಬದಲು 525ಕ್ಕೆ ಸೀಮಿತಗೊಳಿಸಲಾಗಿದೆ.

ಹಿಂದಿ, ಸಂಸ್ಕೃತ, ಮರಾಠಿ, ತುಳು, ತಮಿಳು ಸೇರಿದಂತೆ ಇನ್ನಿತರ ಭಾಷೆಗಳನ್ನ ತೃತೀಯ ಭಾಷೆಯಾಗಿ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಎ,ಬಿ,ಸಿ,ಡಿ ರೀತಿ ಗ್ರೇಡಿಂಗ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಗ್ರೇಡಿಂಗ್ ವ್ಯವಸ್ಥೆಯು ಅಂತಿಮ ಪರೀಕ್ಷೆ ಫಲಿತಾಂಶದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸ್ಪಷ್ಪಪಡಿಸಿದ ಸಚಿವರು, ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದರು.

ಸದ್ಯ ಎಸ್ಸೆಸ್ಸೆಲ್ಸಿಯ ಪರೀಕ್ಷೆ ತೃತೀಯ ಭಾಷೆಗಳಿಗೆ ಮಾತ್ರ ಗ್ರೇಡ್ ನೀಡುವ ತೀರ್ಮಾನ ಕೈಗೊಂಡಿದ್ದು, ಉಳಿದ ತರಗತಿಗಳಿಗೆ ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು. ತೃತೀಯ ಭಾಷೆ ಪರೀಕ್ಷೆ ಬರೆಯುವುದು ಕಡ್ಡಾಯವಾಗಿದೆ ಎಂದರು.


1ನೇ ತರಗತಿ ಸೇರಲು 6 ವರ್ಷ ಪೂರ್ಣಗೊಂಡಿರಬೇಕೆಂಬ ನಿಯಮದಲ್ಲಿ ಎರಡು ತಿಂಗಳು ವಿನಾಯಿತಿ ಈಗಾಗಲೇ ನೀಡಿದೆ. ಕೇಂದ್ರ ಪಠ್ಯಕ್ರಮ ಆಧಾರಿತ ರಾಜ್ಯದಲ್ಲಿರುವ ಸಿಬಿಎಸ್​ಸಿ, ಐಸಿಎಸ್​​​​ಸಿ ಶಾಲೆಗಳು ಒಳಗೊಂಡಂತೆ ಎಲ್ಲಾ ಶಾಲೆಗಳಿಗೆ ಈ ನಿಯಮ ಅನ್ವಯವಾಗಲಿದೆ ಎಂದು ಸಚಿವರು ಮಾಹಿತಿ ಮಾಹಿತಿ ನೀಡಿದರು.


ಕಳೆದ ವರ್ಷ ಸುಮಾರು 1.64 ಲಕ್ಷ ವಿದ್ಯಾರ್ಥಿಗಳು ತೃತೀಯ ಭಾಷೆ ಪರೀಕ್ಷೆಗಳಲ್ಲಿ ಅನುತೀರ್ಣಗೊಂಡಿದ್ದರು. ಈ ಪೈಕಿ 1.48 ಲಕ್ಷ ವಿದ್ಯಾರ್ಥಿಗಳು ಹಿಂದಿಯಲ್ಲಿ ಫೇಲಾಗಿದ್ದರು ಎಂದು ಸಚಿವರು ಇದೇ ವೇಳೆ ತಿಳಿಸಿದರು.


ಹಿಂದಿ ಅಂಕಗಳಿಕೆ ಹೊರತಾಗಿಸುವ ತೀರ್ಮಾನ ಐತಿಹಾಸಿಕ - ಬಿಳಿಮಲೆ ಸ್ವಾಗತಾರ್ಹ: ಹಿಂದಿ ಪರೀಕ್ಷೆಯ ಅಂಕಗಳನ್ನು ಒಟ್ಟು ಅಂಕಗಳಿಕೆಗೆ ಪರಿಗಣಿಸದಂತೆ ಸರ್ಕಾರ ತೆಗೆದುಕೊಂಡಿರುವ ತೀರ್ಮಾನವನ್ನ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಸ್ವಾಗತಿಸಿದ್ದಾರೆ. ರಾಜ್ಯ ಶಿಕ್ಷಣ ನೀತಿಯಲ್ಲಿ ಪ್ರತಿಪಾದಿಸಲಾದ ದ್ವಿಭಾಷಾ ನೀತಿಗೆ ಈ ತೀರ್ಮಾನ ಪೂರಕವಾಗಿದ್ದು, ವಿದ್ಯಾರ್ಥಿಗಳ ಮೇಲೆ ಅನಗತ್ಯ ಭಾಷಾ ಒತ್ತಡವನ್ನು ಕಡಿಮೆ ಮಾಡುವುದರ ಜೊತೆಗೆ ಕನ್ನಡ ಭಾಷೆಯ ಬೆಳವಣಿಗೆಗೆ ಉತ್ತೇಜನ ನೀಡಲಿದೆ ಎಂದರು.

ಕನ್ನಡದ ಹಿತದೃಷ್ಠಿಯಿಂದ ಈ ನಿರ್ಧಾರವು ಅತ್ಯಂತ ಮಹತ್ವದಾಗಿದ್ದು, ರಾಜ್ಯದ ಭಾಷಾ ಸ್ವಾಭಿಮಾನವನ್ನು ಬಲಪಡಿಸುವ ನಿಟ್ಟಿನಲ್ಲಿ ಐತಿಹಾಸಿಕ ಹೆಜ್ಜೆಯಾಗಿದೆ ಎಂದಿರುವ ಬಿಳಿಮಲೆ, ಕನ್ನಡ ಪರವಾದ ಇಂತಹ ನೀತಿಗಳನ್ನು ಸರ್ಕಾರವು ಮುಂದುವರೆಸಬೇಕು ಎಂದು ಹೇಳಿದರು.

ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಕನ್ನಡ ಸ್ನೇಹಿಯಾಗಿ ರೂಪಿಸುವ ದಿಕ್ಕಿನಲ್ಲಿ ಈ ತೀರ್ಮಾನ ಪರಿಣಾಮಕಾರಿಯಾದ ಹೆಜ್ಜೆಯಾಗಿದೆ ಎಂದು ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.


Related News

About Us

Indian Christian Human Rights Federation

Indian Christian Human Rights Forum is a catalyst body standing by the Churches in India with the passion to cater legal, moral and other support.

This organization was Launched in 2008 and has brought legal and political pressure against the injustice on Christians and provided divers kind of assistance to God's Servants, People and the Needy and is always ready to continue to assist.

We are committed to provide all kind of legal assistance to the Churches in times of atrocities and persecution. Also, we provide moral and other relevant support to the needy churches or individuals as Christ Jesus has commanded.

Instagram