DECEMBER 9, 2022
  • Grace Plaza, 2nd Floor, Bailoor,Udupi – 576101
National News

ಗುಡ್ ಫ್ರೈಡೇ – ಈಸ್ಟರ್ ಹಿನ್ನೆಲೆ: ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರ

ಗುಡ್ ಫ್ರೈಡೇ – ಈಸ್ಟರ್ ಹಿನ್ನೆಲೆ: ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರ

ಗುಡ್ ಫ್ರೈಡೇ – ಈಸ್ಟರ್ ಹಿನ್ನೆಲೆ: ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರ

ಪ್ರಯಾಣಿಕರಿಗೆ ಅನುಕೂಲವಾಗುವಂತೆ ಯಶವಂತಪುರ – ಮಡಗಾಂವ್, ಮಡಗಾಂವ್ – ಬೆಂಗಳೂರು ಕಂಟೋನ್ಮೆಂಟ್ ಮತ್ತು ಯಶವಂತಪುರ –ಕಣ್ಣೂರು ನಡುವೆ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ.


ಸುಬ್ರಹ್ಮಣ್ಯ / ದಕ್ಷಿಣ ಕನ್ನಡ: ಮೈಸೂರು ವಿಭಾಗದ ನೈಋತ್ಯ ರೈಲ್ವೆ ಗುಡ್ ಫ್ರೈಡೇ ಮತ್ತು ಈಸ್ಟರ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು, ಹೆಚ್ಚುವರಿ ರೈಲುಗಳ ಸೇವೆಗೆ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಗೋವಾ ಮತ್ತು ಕೇರಳ ನಡುವಿನ ವಿವಿಧ ಮಾರ್ಗಗಳಲ್ಲಿ ವಿಶೇಷ ರೈಲುಗಳ ಸಂಚಾರವನ್ನು ಘೋಷಿಸಲಾಗಿದೆ.

ಪ್ರಯಾಣಿಕರಿಗೆ ಅನುಕೂಲವಾಗುವಂತೆ ಯಶವಂತಪುರ – ಮಡಗಾಂವ್, ಮಡಗಾಂವ್ – ಬೆಂಗಳೂರು ಕಂಟೋನ್ಮೆಂಟ್ ಮತ್ತು ಯಶವಂತಪುರ –ಕಣ್ಣೂರು ನಡುವೆ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ.


ರೈಲು ಸಂಖ್ಯೆ 06271 ಯಶವಂತಪುರ–ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್: ಇದು ಏಪ್ರಿಲ್ 2ರಂದು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಟು, ಏಪ್ರಿಲ್ 3ರಂದು ಸಂಜೆ 5.30ಕ್ಕೆ ಮಡಗಾಂವ್ ತಲುಪಲಿದೆ. ಹಿಂದಿರುಗುವ ಪ್ರಯಾಣದಲ್ಲಿ ರೈಲು ಸಂಖ್ಯೆ 06272 ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 5ರಂದು ಬೆಳಗ್ಗೆ 11 ಗಂಟೆಗೆ ಮಡಗಾಂವ್‌ನಿಂದ ಹೊರಟು, ಏಪ್ರಿಲ್ 6ರಂದು ಬೆಳಗ್ಗೆ 5.20ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ವಿಶೇಷವಾಗಿ, ಈ ರೈಲು ಹಿಂದಿರುಗುವ ಮಾರ್ಗದಲ್ಲಿ ಯಶವಂತಪುರ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ ಹಾಗೂ ಎಸ್ಎಂವಿಟಿ ಬೆಂಗಳೂರು ನಿಲ್ದಾಣದಲ್ಲಿ ನಿಲ್ಲಲಿದೆ.

ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ, ಕಾರವಾರ ಮತ್ತು ಕಾಣಕೋಣ ಸೇರಿದಂತೆ ಹಲವು ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ. ಈ ರೈಲುಗಳಲ್ಲಿ ಒಟ್ಟು 19 ಬೋಗಿಗಳು ಇದ್ದು, 2 ಎಸಿ 2-ಟೈರ್, 2 ಎಸಿ 3-ಟೈರ್, 9 ಸ್ಲೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ 2 ಎಸ್‌ಎಲ್‌ಆರ್ ಬೋಗಿಗಳು ಸೇರಿವೆ. ಇದೇ ವೇಳೆ, ಗುಡ್ ಫ್ರೈಡೇ ವಾರಾಂತ್ಯದ ಪ್ರಯುಕ್ತ ಮತ್ತೊಂದು ಪ್ರಮುಖ ವಿಶೇಷ ರೈಲು ಸೇವೆಯನ್ನೂ ಘೋಷಿಸಲಾಗಿದೆ.


ರೈಲು ಸಂಖ್ಯೆ 06551 ಯಶವಂತಪುರ–ಕಣ್ಣೂರು ವಿಶೇಷ ಎಕ್ಸ್‌ಪ್ರೆಸ್: ಈ ರೈಲು ಏಪ್ರಿಲ್ 2ರಂದು ಬೆಳಗ್ಗೆ 11.50ಕ್ಕೆ ಯಶವಂತಪುರದಿಂದ ಹೊರಟು, ಏಪ್ರಿಲ್ 3ರಂದು ಮುಂಜಾನೆ 3.00ಕ್ಕೆ ಕಣ್ಣೂರು ತಲುಪಲಿದೆ. ಮರಳಿ ಪ್ರಯಾಣದಲ್ಲಿ ರೈಲು ಸಂಖ್ಯೆ 06552 ಕಣ್ಣೂರು–ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 3ರಂದು ಬೆಳಿಗ್ಗೆ 8.45ಕ್ಕೆ ಕಣ್ಣೂರಿನಿಂದ ಹೊರಟು, ಅದೇ ದಿನ ರಾತ್ರಿ 9.30ಕ್ಕೆ ಯಶವಂತಪುರ ತಲುಪಲಿದೆ.

ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಮಂಗಳೂರು ಜಂಕ್ಷನ್, ಕಾಸರಗೋಡು, ಕಾಂಞಗಾಡ್ ಹಾಗೂ ಪಯ್ಯನ್ನೂರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ. ಈ ವಿಶೇಷ ರೈಲು ಒಟ್ಟು 21 ಬೋಗಿಗಳನ್ನು ಹೊಂದಿದ್ದು, 2 ಎಸಿ 2-ಟೈರ್, 6 ಎಸಿ 3-ಟೈರ್, 7 ಸ್ಲೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ 2 ಲಗೇಜ್-ಕಮ್-ಜನರೇಟರ್ ಮತ್ತು ಬ್ರೇಕ್ ವ್ಯಾನ್​ಗಳನ್ನು ಒಳಗೊಂಡಿದೆ.

ಹಬ್ಬದ ಅವಧಿಯಲ್ಲಿ ಜನರ ಸಂಚಾರ ಹೆಚ್ಚಾಗುವ ಹಿನ್ನೆಲೆಯಲ್ಲಿ ಈ ವಿಶೇಷ ರೈಲುಗಳ ವ್ಯವಸ್ಥೆ ಪ್ರಯಾಣಿಕರಿಗೆ ಬಹಳ ಸಹಾಯಕವಾಗಲಿದೆ. ರೈಲ್ವೆ ಇಲಾಖೆ ಪ್ರಯಾಣಿಕರು ಈ ಸೇವೆಯನ್ನು ಬಳಸಿಕೊಂಡು ಸುಗಮವಾಗಿ ಪ್ರಯಾಣಿಸಬಹುದು ಎಂದು ತಿಳಿಸಿದೆ.



Related News

About Us

Indian Christian Human Rights Federation

Indian Christian Human Rights Forum is a catalyst body standing by the Churches in India with the passion to cater legal, moral and other support.

This organization was Launched in 2008 and has brought legal and political pressure against the injustice on Christians and provided divers kind of assistance to God's Servants, People and the Needy and is always ready to continue to assist.

We are committed to provide all kind of legal assistance to the Churches in times of atrocities and persecution. Also, we provide moral and other relevant support to the needy churches or individuals as Christ Jesus has commanded.

Instagram